Font size:
Karnataka Weather Tomorrow: ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 25 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಬೆಂಗಳೂರಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡ ಜಿಲ್ಲೆಗಳಾದಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಪ್ರದೇಶಗಳಾದ ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
Posted 1 month, 2 weeks ago






Comments
Leave a Comment